ಅಭಿಪ್ರಾಯ / ಸಲಹೆಗಳು

ಪರಿಚಯ

     

 

 

     ಭಾಷಾವಾರು ಪ್ರಾಂತ್ಯಗಳ ರಚನೆಯ ಬಹುಮುಖ್ಯ ಉದ್ದೇಶಗಳಲ್ಲಿ ಆಯಾ ಪ್ರದೇಶದಲ್ಲಿ ಪ್ರಧಾನವಾಗಿ ಬಳಕೆಯಲ್ಲಿರುವ ಭಾಷೆಯಲ್ಲಿ ಆಡಳಿತವನ್ನು ನಡೆಸುವುದು ಪ್ರಮುಖವಾಗಿರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರವು ಜಾರಿಗೆ ತಂದ ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ – 1963 ಕನ್ನಡಕ್ಕೆ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನವನ್ನು ಕಲ್ಪಿಸಿತು. ಕರ್ನಾಟಕದಲ್ಲಿ ಕನ್ನಡದ ಸಾರ್ವಭೌಮತೆಯನ್ನು ಈ ಅಧಿನಿಯಮವು ಪ್ರತಿಷ್ಠಾಪಿಸಿ ಜನರಾಡುವ ಭಾಷೆಯಲ್ಲಿ ಆಡಳಿತ ಯಂತ್ರದ ಕಾರ್ಯನಿರ್ವಹಣೆಗೆ ಅನುವು ಮಾಡಿಕೊಡುವ ವಾತಾವರಣವನ್ನು ಒದಗಿಸಿತು. ಅಂದಿನ ಸಾಮಾಜಿಕ ಪ್ರಭಾವಗಳ ವ್ಯಾಪ್ತಿಯಲ್ಲಿ ಕನ್ನಡ ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಳ್ಳಬೇಕೆನ್ನುವ ಸರ್ಕಾರದ ಸದಾಶಯವನ್ನು ಪರಾಮರ್ಶಿಸಿ, ಸಲಹೆ ಸೂಚನೆಯನ್ನು ನೀಡಲು 1983 ರಲ್ಲಿ ಕನ್ನಡ ಕಾವಲು ಸಮಿತಿಯನ್ನು ರಚಿಸಲಾಯಿತು. ಇದು 1985 ರಲ್ಲಿ ಕನ್ನಡ ಕಾವಲು ಮತ್ತು ಗಡಿ ಸಲಹೆ ಸಮಿತಿಯಾಗಿ ಮರು ನಾಮಕರಣಗೊಂಡು 1990 ರಲ್ಲಿ ಕನ್ನಡ ಅಭಿವೃದ್ಧಿ ಮಂಡಳಿಯಾಯಿತು. ದಿನಾಂಕ : 06.02.1992 ರಲ್ಲಿ ಕನ್ನಡ ಅಭಿವೃದ್ಧಿ ಮಂಡಳಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವಾಗಿ ಆಸ್ತಿತ್ವಕ್ಕೆ ಬಂದು ಡಾ. ಜಿ. ನಾರಾಯಣ ಇದರ ಮೊದಲ ಅಧ್ಯಕ್ಷರಾದರು.

 

      ಕರ್ನಾಟಕ ಸರ್ಕಾರದ ಅಧಿಸೂಚನೆ ಸಂಖ್ಯೆ  ಜಿ 581  ಎಲ್‌ಜಿಎನ್‌ 93 ಬೆಂಗಳೂರು ದಿನಾಂಕ : 01.10.1994 ರನುಸಾರ ಸಾಂಸ್ಥಿಕ ಆಸ್ತಿತ್ವವನ್ನು ಕಂಡ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಂದಿನಿಂದಲೂ ಕನ್ನಡ ಭಾಷೆ, ಸಂಸ್ಕೃತಿಯ ರಕ್ಷಣೆಗೆ ಸಾಂವಿಧಾನಿಕವಾದ ನೈತಿಕ ಶಕ್ತಿಯನ್ನು ತುಂಬುತ್ತಾ ಬಂದಿದೆ.

 

 

 

 

 

ಇತ್ತೀಚಿನ ನವೀಕರಣ​ : 15-07-2020 03:18 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಅಭಿವೃದ್ಧಿ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080