ಅಭಿಪ್ರಾಯ / ಸಲಹೆಗಳು

ಕಾರ್ಯ ಚಟುವಟಿಕೆ

 

 ಕೆಳಕಂಡ ಸಾಮಾನ್ಯ ಉಪಕ್ರಮಗಳನ್ನು ಜಾರಿಯಲ್ಲಿಡಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧಿನಿಯಮವು ಅವಕಾಶ ಕಲ್ಪಿಸಿದೆ. 

 

1.  ರಾಜ್ಯ ಸರ್ಕಾರದ ಆಡಳಿತ ಭಾಷಾ ನೀತಿಯ ಅನುಷ್ಠಾನದಲ್ಲಿ ಸರಕಾರದ ಎಲ್ಲ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ಸರಕಾರದ ಅಧೀನದ ಎಲ್ಲ ಸಂಸ್ಥೆಗಳು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸುವುದು.

 

2.  ರಾಜ್ಯ ಸರ್ಕಾರ ಅಂಗೀಕರಿಸಿರುವ ಡಾ|| ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಕ್ರಮಗಳ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುವುದು.

 

3.  ಕನ್ನಡವನ್ನು ಆಡಳಿತ ಭಾಷೆಯನ್ನಾಗಿ ಜಾರಿಗೆ ತರುವಲ್ಲಿ ಇರುವ ಅಡಚಣೆಗಳನ್ನು ಗಮನಿಸಿ ಅವುಗಳ ನಿವಾರಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು

 

4.  ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕನ್ನಡ ಬಳಕೆಗೆ ಅನುಕೂಲವಾದ ತರಬೇತಿ ಕಾರ್ಯಕ್ರಮಗಳನ್ನು, ಶಿಬಿರಗಳನ್ನು, ಪ್ರದರ್ಶನಗಳನ್ನು ಮತ್ತು ವಿಚಾರ ಸಂಕಿರಣಗಳನ್ನು ಏರ್ಪಡಿಸತಕ್ಕದ್ದು ಮತ್ತು ಕನ್ನಡೇತರರಿಗೆ ಕನ್ನಡ ಕಲಿಕೆ ಕಾರ್ಯಕ್ರಮಗಳನ್ನು ಮತ್ತು ಆ ಸಂಬಂಧ ಪಠ್ಯಕ್ರಮ, ಸಾಹಿತ್ಯ ಸಿದ್ದಪಡಿಸುವುದು.

 

5.  ಕನ್ನಡ ಅಭಿವೃದ್ಧಿಗೆ ಸಂಬಂಧಿಸಿದ ಉಪಯುಕ್ತ ಪ್ರಕಟಣೆಗಳನ್ನು ಪ್ರಕಟಿಸತಕ್ಕದ್ದು. ಖರೀದಿಸತಕ್ಕದ್ದು ಮತ್ತು ವಿತರಿಸುವುದು.

 

6.  ಕಛೇರಿಗಳಲ್ಲಿ ಬಳಸಲಾಗುವ ಎಲ್ಲ ನಮೂನೆಗಳನ್ನು ಕನ್ನಡದಲ್ಲಿ ಮುದ್ರಣವಾಗುವಂತೆ ನೋಡಿಕೊಳ್ಳತಕ್ಕದ್ದು ಹಾಗೂ ಕನ್ನಡೇತರ ಭಾಷೆಗಳಲ್ಲಿ ಇರಲೇಬೇಕಾದ ನಮೂನೆ, ಪ್ರಕಟಣೆ ಮತ್ತು ರಿಜಿಸ್ಟರ್ಗಳನ್ನು ಪರಿಶೀಲಿಸಿ ಮುದ್ರಣಕ್ಕೆ ಅನುಮತಿ ನೀಡುವುದು

 

7.  ರಾಜ್ಯದಲ್ಲಿ ಹೆಚ್ಚು ಜನಸಂಪರ್ಕ ಹೊಂದಿರುವ ಕೇಂದ್ರ ಸರ್ಕಾರದ ಕಚೇರಿಗಳು, ಬ್ಯಾಂಕುಗಳು, ಅಂಚೆ ಕಛೇರಿಗಳು ಮತ್ತಿತರ ಕಛೇರಿಗಳು ಮತ್ತು ಉದ್ದಿಮೆಗಳಲ್ಲಿ ಇಂದಿನ ಬಳಕೆಯಲ್ಲಿರುವ ನಮೂನೆ, ನೋಟೀಸು, ನಾಮಫಲಕಗಳಲ್ಲಿ ಕೇಂದ್ರ ಸರ್ಕಾರದ ಭಾಷಾ ನೀತಿಗೆ ಅನುಗುಣವಾಗಿ ಪ್ರಾದೇಶಿಕ ಭಾಷೆಯನ್ನು ಬಳಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸತಕ್ಕದ್ದು ಮತ್ತು ಈ ಸಂಬಂಧವಾಗಿ ಅಂತಹ ಕಛೇರಿಗಳೊಂದಿಗೆ ಪತ್ರವ್ಯವಹಾರ ಕೈಗೊಳ್ಳುವುದು

 

8.  ಆಡಳಿತ ಪೂರಕ ಸಾಹಿತ್ಯದ ರಚನೆ, ಪರಿಷ್ಕರಣೆ, ಮುದ್ರಣ ಮತ್ತು ವಿತರಣೆ ವಿಷಯಗಳಲ್ಲಿ ತೀರ್ಮಾನ ಕೈಗೊಳ್ಳತಕ್ಕದ್ದು ಮತ್ತು ಈ ಕ್ಷೇತ್ರದಲ್ಲಿನ ಪ್ರಗತಿಯನ್ನು ಆಗಿಂದಾಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದು.

 

9.  ಕನ್ನಡ ಪಠ್ಯಪುಸ್ತಕಗಳನ್ನು ಪರೀಕ್ಷಿಸಿ ಲೋಪದೋಷಗಳೇನಾದರೂ ಇದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡುವುದು

 

10.  ಪ್ರಾಧಿಕಾರದ ಉದ್ದೇಶಗಳನ್ನು ನೆರವೇರಿಸಲು ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡುವುದು:-

 

  1. ಅ) ರಾಜ್ಯಮಟ್ಟದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ವಿಭಾಗ ಮಟ್ಟದಲ್ಲಿ ವಿಭಾಗಾಧಿಕಾರಿಗಳು, ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು, ಉಪವಿಭಾಗಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳು ಮತ್ತು ತಾಲೂಕುಮಟ್ಟದಲ್ಲಿ ತಹಶೀಲ್ದಾರ್ ಇವರನ್ನು ಪ್ರಾಧಿಕಾರದ ಉದ್ದೇಶಗಳನ್ನು ನೆರವೇರಿಸಲು ಜವಾಬ್ದಾರರನ್ನಾಗಿ ಮಾಡುವುದು.

     

    ಆ) ರಾಜ್ಯ ಸರ್ಕಾರವು ಪ್ರಾಧಿಕಾರದ ಬೇರೆ ಬೇರೆ ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರಲು ಜವಾಬ್ದಾರರನ್ನಾಗಿ ಮಾಡಲಾದ ಅಧಿಕಾರಿಗಳನ್ನು ಅಧಿಸೂಚನೆಯ ಮೂಲಕ ನಿರ್ದಿಷ್ಟಪಡಿಸತಕ್ಕದ್ದು ಮತ್ತು ಬೇರೆ ಬೇರೆ ಇಲಾಖೆಗಳಿಗಾಗಿ ಬೇರೆ ಬೇರೆ ವರ್ಗಗಳ ಅಧಿಕಾರಿಗಳನ್ನು ನಿರ್ದಿಷ್ಟಪಡಿಸುವುದು.

  2. ಮಾಹಿತಿ ಪಡೆದುಕೊಳ್ಳುವುದು:-

     

    ಪ್ರಾಧಿಕಾರವು ಅಧಿನಿಯಮದ ಉದ್ದೇಶಗಳಿಗಾಗಿ ರಾಜ್ಯ ಸರ್ಕಾರದ ಯಾವ ಅಧಿಕಾರಿಯಿಂದಲಾದರೂ ಡಾ|| ಸರೋಜಿನಿ ಮಹಿಷಿ ವರದಿಯನ್ನು ಅನಷ್ಟಾನಕ್ಕೆ ತರುವುದಕ್ಕೆ ಮತ್ತು ಕನ್ನಡ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಕೋರಬಹುದು ಮತ್ತು ಪಡೆದುಕೊಳ್ಳಬಹುದು ಮತ್ತು ಅಂತಹ ಅಧಿಕಾರಿಯು ಪ್ರಾಧಿಕಾರವು ಕೋರಬಹುದಾದ ಮಾಹಿತಿಯನ್ನು ಒದಗಿಸಲು ಬದ್ಧನಾಗಿರತಕ್ಕದ್ದ

  3. ಪ್ರಾಧಿಕಾರದ ಸಲಹೆಗಳು:-

     

    ಪ್ರಾಧಿಕಾರವು ಈ ಅಧಿನಿಯಮದ ಉದ್ದೇಶಗಳನ್ನು ನೆರವೇರಿಸುವ ಸಲುವಾಗಿ ತನ್ನ ಯೋಜನೆಗಳನ್ನು ಮತ್ತು ಕಾರ್ಯಕ್ರಮಗಳನ್ನು ಅನುಷ್ಟಾನಕ್ಕೆ ತರುವ ಬಗ್ಗೆ ರಾಜ್ಯ ಸರ್ಕಾರಕ್ಕೆ ಸಲಹೆಗಳನ್ನು ನೀಡಬಹುದು.

  4. ಕರ್ತವ್ಯ ಲೋಪವನ್ನು ದಾಖಲಿಸುವ ಮತ್ತು ನೇಮಕಾತಿ ಪ್ರಾಧಿಕಾರಕ್ಕೆ ತಿಳಿಸುವ ಅಧಿಕಾರ:

     

    ಪ್ರಾಧಿಕಾರವು ಈ ಅಧಿನಿಯಮದ ಉದ್ದೇಶಗಳನ್ನು ನೆರವೇರಿಸುವ ಸಲುವಾಗಿ, ಸರ್ಕಾರವು ಕಾಲಕಾಲಕ್ಕೆ ಹೊರಡಿಸುವ ಅಥವಾ ಈಗಾಲೇ ಜಾರಿಯಲ್ಲಿರುವ ಯಾವುದೇ ಆದೇಶವನ್ನು ರಾಜ್ಯ ಸರ್ಕಾರ ಮತ್ತು ಸ್ಥಳೀಯ ನಿಕಾಯಗಳ ಅಧಿಕಾರಿಗಳು ಮತ್ತು ನೌಕರರು ಉಲ್ಲಂಘಿಸಿದರೆ ಅಂತಹ ಉಲ್ಲಂಘನೆಯನ್ನು ಕರ್ತವ್ಯಲೋಪವೆಂದು ದಾಖಲಿಸತಕ್ಕದ್ದು ಮತ್ತು ಅಂತಹ ವ್ಯಕ್ತಿಗಳ ವಿರುದ್ಧ ಅಗತ್ಯಕ್ರಮ ಕೈಗೊಳ್ಳುವಂತೆ ನೇಮಕಾತಿ ಪ್ರಾಧಿಕಾರಕ್ಕೆ ಸಲಹೆಗಳನ್ನು ನೀಡುವುದು.

 

 

 

 

ಇತ್ತೀಚಿನ ನವೀಕರಣ​ : 25-04-2019 12:26 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕನ್ನಡ ಅಭಿವೃದ್ಧಿ ಪ್ರಾಧಿಕಾರ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080